ರಾಮಲಿಂಗಾರೆಡ್ಡಿ ಮನಸ್ತಾಪ ಬಗೆ ಹರಿಸುತ್ತೇವೆ: KPCC ಅಧ್ಯಕ್ಷ ಹರಿಪ್ರಸಾದ್
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮಾತನಾಡಿದ್ದಾರೆ. ರಾಮಲಿಂಗಾರೆಡ್ಡಿ ಅವರು ನಮ್ಮ ಪಕ್ಷದ ಹಿರಿಯ ನಾಯಕರು. ಮನಸ್ತಾಪ ಇದ್ದರೆ ಬಗೆ ಹರಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಮುಂದುವರಿದು, ಪಕ್ಷಕ್ಕೆ ಹಾನಿಯಾಗುವ ಯಾವುದೇ ಕೆಲಸವನ್ನು ರಾಮಲಿಂಗಾರೆಡ್ಡಿಯವರು ಮಾಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ನಗರ ಅಭಿವೃದ್ಧಿ ಖಾತೆಗೆ ಪಟ್ಟು ಹಿಡಿದಿರುವ ರಾಮಲಿಂಗಾರೆಡ್ಡಿ, ಜಲಸಂಪನ್ಮೂಲ ಖಾತೆ ವಹಿಸಿಕೊಳ್ಳಲು ನಿರಾಕರಿಸಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಇಂದು (ಶುಕ್ರವಾರ) ರಾಜೀನಾಮೆ ಪತ್ರ ರವಾನಿಸಿದ್ದಾರೆ.
‘ತಮ್ಮ ಸಚಿವ ಸಂಪುಟದಲ್ಲಿ ಸ್ಥಾನಾ ನೀಡಿದ್ದಕ್ಕೆ ತಮಗೂ, ಕಾಂಗ್ರೆಸ್ ಪಕ್ಷಕ್ಕೂ ಧನ್ಯವಾದಗಳು. ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಕೋರುತ್ತೇನೆ‘ ಎಂದು ತಿಳಿಸಿದ್ದಾರೆ.