Select Location
All Locations
State
Region
City / District
ಉಜ್ವಲ ಗ್ರಾಹಕರಿಗೆ ಶಾಕ್: ಸಬ್ಸಿಡಿ ಸಿಲಿಂಡರ್ ಸಂಖ್ಯೆ 4ಕ್ಕೆ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಉಜ್ವಲ ಗ್ರಾಹಕರಿಗೆ ಶಾಕ್: ಸಬ್ಸಿಡಿ ಸಿಲಿಂಡರ್ ಸಂಖ್ಯೆ 4ಕ್ಕೆ ಕಡಿತಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ‘ಪ್ರಧಾನ್ ಮಂತ್ರಿ ಉಜ್ವಲ ಯೋಜನೆ’ಯ (PMUY) ಫಲಾನುಭವಿಗಳಿಗೆ ಕೇಂದ್ರ ಸರ್ಕಾರವು ಭಾರಿ ಆಘಾತ ನೀಡಿದೆ. ಉಜ್ವಲ ಯೋಜನೆಯಡಿ ಗ್ರಾಹಕರಿಗೆ ವಾರ್ಷಿಕವಾಗಿ ಸಿಗುತ್ತಿದ್ದ ಸಬ್ಸಿಡಿ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಸಂಖ್ಯೆಯನ್ನು ಕೇವಲ 4ಕ್ಕೆ ಕಡಿತಗೊಳಿಸಲಾಗಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಬಡ ಕುಟುಂಬಗಳ ಸರಾಸರಿ ವಾರ್ಷಿಕ ಸಿಲಿಂಡರ್ ಬಳಕೆಯನ್ನು ಆಧರಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ. 12 ರಿಂದ 4 ಕ್ಕೆ ಇಳಿಕೆ! 2016 ರ ಮೇ ತಿಂಗಳಲ್ಲಿ ಬಡ ಕುಟುಂಬಗಳ ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಆರಂಭಿಸಲಾಗಿತ್ತು. ಪ್ರಾರಂಭದಲ್ಲಿ ಫಲಾನುಭವಿಗಳಿಗೆ ವರ್ಷಕ್ಕೆ 12 ಸಬ್ಸಿಡಿ ಸಿಲಿಂಡರ್‌ಗಳನ್ನು ನೀಡಲಾಗುತ್ತಿತ್ತು. ಆದರೆ, ಕಳೆದ ವರ್ಷವಷ್ಟೇ ಈ ಕೋಟಾವನ್ನು 9 ಕ್ಕೆ ಇಳಿಸಿದ್ದ ಕೇಂದ್ರ ಸರ್ಕಾರ, ಈಗ ಅದನ್ನು ಮತ್ತಷ್ಟು ಕಡಿತಗೊಳಿಸಿ ಕೇವಲ 4 ಸಿಲಿಂಡರ್‌ಗಳಿಗೆ ಸೀಮಿತಗೊಳಿಸಿದೆ.

Source : Udayavani

1 hour ago

Home Flash News